ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ 2023 ||

Spread the love

ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ 37 ವಾಹನ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ06/04/2023ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು S.S.L.C (10th) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆಯ ವಿಧಾನ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ( ಮೆರಿಟ್ ಲಿಸ್ಟ್ ) ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
  • SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ ಮತ್ತು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25500 – 81100/- (Level-4) ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 6 ಎಪ್ರಿಲ್ 2023
ಉದ್ಯೋಗ ಸ್ಥಳ : ಕರ್ನಾಟಕ

Apply online : Click here

Leave a Reply

Your email address will not be published. Required fields are marked *