ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಕಾನೂನು ಅಧಿಕಾರಿ, ವೈಜ್ಞಾನಿಕ ಅಧಿಕಾರ, ಮತ್ತು ಜೂನಿಯರ್ ಸೈನ್ಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 27-07-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ LLB/ B.E./ B. Tech/ Ph. D/ M.E / M. Tech/ Diploma/ M. Sc ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೇತನ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು : |
ಒಟ್ಟು ಹುದ್ದೆಗಳ ಸಂಖ್ಯೆ : 71 |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12 ಜುಲೈ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಜುಲೈ 2023 |
ಉದ್ಯೋಗ ಸ್ಥಳ : ಭಾರತದಾದ್ಯಂತ |
Application link : Click here