ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 5000 ಕ್ಕಿಂತ ಅಧಿಕ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), ಪಿಯುಸಿ(PUC), ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು : |
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 6/03/2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/03/2023 |
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 5/04/2023 |
Apply Online : Click here