ಕೋಲಾರ ಚಿಕ್ಕಬಳ್ಳಾಪುರ DCC ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ 2023.

Spread the love

ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಲೆಕ್ಕ ಪರಿಶೋಧಕ, ಸಹಾಯಕ ವ್ಯವಸ್ಥಾಪಕ ಹಾಗೂ ಚಾಲಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ :-

ಒಟ್ಟು ಹುದ್ದೆಗಳು : 36
ಲೆಕ್ಕಪರಿಶೋಧಕ – 9
ಸಹಾಯಕ ವ್ಯವಸ್ಥಾಪಕ – 14
ಚಾಲಕ – 3
ಜವಾನರು – 10

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC ಹಾಗು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
16-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯಥಿಗಳಿಗೆ : 03 ವರ್ಷಗಳು ಹಾಗೂ
SC/ST ಅಭ್ಯಥಿಗಳಿಗೆ : 05 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/OBC ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು
ಹಾಗೂ SC/ST/ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಆಯ್ಕೆಯ ವಿಧಾನ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ :-

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನವು 36,000 /-ರೂ ಗಳಿಂದ 67,550/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 2 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಮಾರ್ಚ್ 2023
ಉದ್ಯೋಗ ಸ್ಥಳ : ಕೋಲಾರ ಚಿಕ್ಕಬಳ್ಳಾಪುರ
Apply online : Click here

Leave a Reply

Your email address will not be published. Required fields are marked *