ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4545 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ
- ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ (ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
- ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
- SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವೇತನ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ರೂ 19,900/- ಗಳಿಂದ 47,920/-ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ : 4545
ಅರ್ಜಿ ಸಲ್ಲಿಸಲು ಪ್ರಾರಂಭನದ ದಿನಾಂಕ : 1 ಜುಲೈ 2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21 ಜುಲೈ 2023
ಉದ್ಯೋಗ ಸ್ಥಳ : ಭಾರತದಾದ್ಯಂತ
Application : Click here