ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 500 ಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನ ಆಹ್ವಾನಿಸಲಾಗಿದೆ, ಕೂಡಲೇ ಅರ್ಜಿ ಸಲ್ಲಿಸಿ.

Spread the love

ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು598 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು.

ಹುದ್ದೆಯ ವಿವಿರ :-

ಸೈಂಟಿಸ್ಟ್ ಬಿ : 71
ಸೈಂಟಿಸ್ಟ್ ಆಫೀಸರ್ / ಇಂಜಿನಿಯರ್ : 196
ಸೈಂಟಿಸ್ಟ್ / ಟೆಕ್ನಿಕಲ್ ಅಸಿಸ್ಟೆಂಟ್ : 331
ಒಟ್ಟು ಹುದ್ದೆಗಳ ಸಂಖ್ಯೆ : 598

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc./ MS/ MCA/ B.E./ B.Tech./ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಯ್ಕೆಯ ವಿಧಾನ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ :-

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿದೆ.

ಸೈಂಟಿಸ್ಟ್ ಬಿ : 56100 – 177500
ಸೈಂಟಿಸ್ಟ್ ಆಫೀಸರ್ / ಇಂಜಿನಿಯರ್ : 44900 – 142400
ಸೈಂಟಿಸ್ಟ್ / ಟೆಕ್ನಿಕಲ್ ಅಸಿಸ್ಟೆಂಟ್ : 35400 – 112400

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 6 ಮಾರ್ಚ್ ೨೦೨೩
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4 ಎಪ್ರಿಲ್ 2023
ಉದ್ಯೋಗ ಸ್ಥಳ : ಭಾರತದಾದ್ಯಂತ

Apply online : click here

Leave a Reply

Your email address will not be published. Required fields are marked *