ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :-
ಒಟ್ಟು ಹುದ್ದೆಗಳು : 71
ಮೆಕ್ಯಾನಿಕ್ ಡೀಸೆಲ್ – 11
ಮೆಕ್ಯಾನಿಕ್ ಮೋಟಾರ್ ವೆಹಿಕಲ್ – 10
ಎಲೆಕ್ಟ್ರಿಷಿಯನ್ – 12
ಫಿಟ್ಟರ್ – 05
ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) – 1
ಟರ್ನರ್ – 4
ಕೋಪಾ – 28
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
ವಯೋಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ.
ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆಯ ವಿಧಾನ :-
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ ಶ್ರೇಣಿ :-
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯ ನಿಯಮಾನುಸಾರವಾಗಿ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :-
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ.